-->
ಬೆಳ್ತಂಗಡಿಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ

ಬೆಳ್ತಂಗಡಿಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ


ಬೆಳ್ತಂಗಡಿ ತಾಲೂಕಿನ ನಡ ಕನ್ಯಾಡಿ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. 

ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಸಂಚರಿಸುತ್ತಿದ್ದ ಸ್ಥಳಗಳನ್ನು ಗುರುತಿಸಿ, ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಇರಿಸಿತ್ತು. ಅರಣಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಚಿರತೆ ಸಿಲುಕಿದೆ.

ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಹಲವು ಸಾಕು ಪ್ರಾಣಿಗಳ ಮೇಲೂ ದಾಳಿ ನಡೆಸಿದ್ದ ಘಟನೆಗಳು ವರದಿಯಾಗಿದ್ದವು. ಇದರಿಂದ ಸ್ಥಳೀಯರಲ್ಲಿ ಆತಂಕ ಎದುರಾಗಿತ್ತು. 


Ads on article

Advertise in articles 1

advertising articles 2

Advertise under the article