ಪೊಲೀಸರಿಗೆ ಗುಡ್ ನ್ಯೂಸ್; ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಘೋಷಣೆ
Thursday, January 29, 2026
ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ. ಇದರಿಂದ ಒತ್ತಡದ ಕೆಲಸ ಹಾಗೂ ವೈಯಕ್ತಿಕ ಜೀವನ ಸಮತೋಲನೆಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ನೀಡಿದ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಮುಖವಾಗಿ ಕೆಳ ಹಂತದ ಸಿಬ್ಬಂದಿಗಳಾದ ಪೊಲೀಸ್ ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್, ಸಹಾಯಕ ಪೊಲೀಸ್ ಉಪನಿರೀಕ್ಷಕರು, ಈ ಶ್ರೇಣಿಯ ಅಧಿಕಾರಿಗಳಿಗೆ ರಜೆ ಸೌಲಭ್ಯ ಸಿಗಲಿದೆ.
