ಪ್ರೀತಿಸಿದ ಯುವತಿ ಮದುವೆಗೆ ನಿರಾಕರಣೆ; ಮನನೊಂದ ಯುವಕ ಆತ್ಮಹತ್ಯೆ
Wednesday, January 07, 2026
ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.
ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದ ಪವನ್ ಭಟ್ (24) ಆತ್ಮಹತ್ಯೆಗೆ ಶರಣಾದ ಯುವಕ.
ವೃತ್ತಿಯಲ್ಲಿ ಪುರೋಹಿತರಾಗಿದ್ದ ಪವನ್ ಭಟ್ ಅದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬOಧ ಹೊಂದಿದ್ದರು ಎನ್ನಲಾಗಿದೆ. ಈ ಸಂಬOಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾರೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಇದರಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.