ಸೇತುವೆಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
Friday, January 02, 2026
ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದು ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಸುಕಿನ ವೇಳೆ 2:30ರ ಸುಮಾರಿಗೆ ನಡೆದಿದೆ.
ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರಕಾಡು ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.