ಕಾರು ಪಲ್ಟಿಯಾಗಿ ಕಾಣಿಸಿಕೊಂಡ ಬೆಂಕಿ; ಪ್ರಯಾಣಿಕರು ಸಜೀವ ದಹನ
Wednesday, January 07, 2026
ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೊತ್ತಿ ಉರಿದ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್‌ನಲ್ಲಿ ನಡೆದಿದೆ.
ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದ್ದು, ಕಾರಿನ ನಂಬರ್ ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದೆ. ಹೀಗಾಗಿ ಕಾರು ಮತ್ತು ಕಾರಿನಲ್ಲಿ ಇದ್ದವರ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಮೃತರು ಸಿದ್ದಾಪುರ ಮೂಲದವರೆಂದು ಗೊತ್ತಾಗಿದ್ದು, ಘಟನೆ ಬಗ್ಗೆ ಸಂಬOಧಿಕರಿಗೆ ಮಾಹಿತಿ ರವಾನೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.