-->
ಮಂಗಳೂರು ಮೂಲದ ವಿದ್ಯಾರ್ಥಿನಿ ಸಾವು ಪ್ರಕರಣ; ಆರೋಪಿಯ ಬಂಧನ

ಮಂಗಳೂರು ಮೂಲದ ವಿದ್ಯಾರ್ಥಿನಿ ಸಾವು ಪ್ರಕರಣ; ಆರೋಪಿಯ ಬಂಧನ


ಬೆOಗಳೂರಿನ ಅಪಾರ್ಟ್ಮೆಂಟ್‌ನಲ್ಲಿ ನಡೆದ ಬೆಂಕಿ ಅವಘಡದಿಂದ ಮಂಗಳೂರು ಮೂಲದ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬOಧಿಸಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಕೇರಳ ಮೂಲದ ಕರ್ನಲ್ ಕುರೈ (18) ಬಂಧಿತ ಆರೋಪಿ. 

ಜನವರಿ 3ರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕರ್ನಲ್ ಕುರೈ ಅಪಾರ್ಟ್ಮೆಂಟ್‌ನ ಸ್ಲೈಡಿಂಗ್ ವಿಂಡೋ ಮೂಲಕ ಶರ್ಮಿಳಾ ಮನೆಯೊಳಗೆ ನುಗ್ಗಿದ್ದಾನೆ. ಆ ವೇಳೆ ಮನೆಯಲ್ಲಿ ಶರ್ಮಿಳಾ ಒಬ್ಬರೇ ಇದ್ದರು. ಒಳನುಗ್ಗಿದ ಆರೋಪಿ, ಶರ್ಮಿಳಾಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ಇದಕ್ಕೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಪ್ರತಿರೋಧದ ವೇಳೆ ಆರೋಪಿ ಬಲವಂತವಾಗಿ ಆಕೆಯ ಮೇಲೆ ಎರಗಿದ್ದು, ಶರ್ಮಿಳಾ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದ್ದ ಶರ್ಮಿಳಾಳನ್ನು ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಶರ್ಮಿಳಾ ಮೂಲತಃ ಮಂಗಳೂರಿನವರು. ಅಕ್ಸೆಂಚರ್ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು. ಶರ್ಮಿಳಾ ಬೆಂಗಳೂರಿನ ಸುಬ್ರಮಣ್ಯ ಲೇಔಟ್‌ನಲ್ಲಿ ವಾಸವಿದ್ದರು. ಮಂಗಳೂರನಿOದ ಎರಡು ವರ್ಷದ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದರು. ಮೃತ ಶರ್ಮಿಳಾ ವಾಸವಿದ್ದ ಫ್ಲಾಟ್‌ನ ಮುಂದಿನ ನಿವಾಸದಲ್ಲಿ ಕರ್ನಲ್ ಕುರೈ ವಾಸವಿದ್ದ. ಕೇರಳದ ಮೂಲದ ಈತ ಪಿಯುಸಿ ವಿದ್ಯಾರ್ಥಿಯಾಗಿದ್ದ. ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಕಳೆದ ಎರಡು ವರ್ಷದಿಂದ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ಶರ್ಮಿಳಾ ವಾಸವಾಗಿದ್ದರು. ನಗರದ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡ್ತಿದ್ದ ಶರ್ಮಿಳಾಗೆ, ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು.

ಜನವರಿ 3 ರಂದು ರಾತ್ರಿ 10.45 ರ ಸುಮಾರಿಗೆ ಅಪಾರ್ಟ್ಮೆಂಟ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಪೊಲೀಸರಿಗೆ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭದಲ್ಲಿ, ಮಹಿಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿತ್ತು. ರೂಮಿನ ಕಿಟಕಿ ತೆರೆದಿರುವುದು, ಫೋನ್ ನಾಪತ್ತೆಯಾಗಿರುವುದು ಹಾಗೂ ಬೆಂಕಿ ಹೊತ್ತುಕೊಳ್ಳಲು ಯಾವುದೇ ಮೂಲವಿಲ್ಲದಿರುವುದು ಪೊಲೀಸರಿಗೆ ಸವಾಲಾಗಿ ಮಾರ್ಪಟ್ಟಿತ್ತು.

ಪೊಲೀಸರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಹಲವಾರು ಅನುಮಾನ ವ್ಯಕ್ತಪಡಿಸಿತು. ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸ್ಫೋಟದಂತಹ ಯಾವುದೇ ಬೆಂಕಿಯ ಮೂಲವಿರಲಿಲ್ಲ. ಶವ ಪತ್ತೆಯಾದ ಕೋಣೆಯ ಕಿಟಕಿ ತೆರೆದಿದ್ದು, ಉಸಿರುಗಟ್ಟಿ ಸಾವು ಸಂಭವಿಸಿರುವ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿತು. ಜೊತೆಗೆ ಶವ ಆಕೆಯ ಮಲಗುವ ಕೋಣೆಯಲ್ಲಿ ಪತ್ತೆಯಾಗಿರಲಿಲ್ಲ ಬದಲಾಗಿ ಆಕೆಯ ಫ್ಲಾಟ್‌ಮೇಟ್‌ನ ಕೋಣೆಯಲ್ಲಿ ಕಂಡುಬOದಿತ್ತು. ಘಟನೆ ನಡೆದಾಗ ಫ್ಲಾಟ್‌ಮೇಟ್ ಊರಿನಲ್ಲಿ ಇರಲಿಲ್ಲ.

ಇದಲ್ಲದೆ, ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿತ್ತು. ಒಳಗಿನಿಂದ ಲಾಕ್ ಆಗಿದ್ದರಿಂದ ಆರೋಪಿ ಮನೆಗೆ ಹೇಗೆ ಪ್ರವೇಶಿಸಿದನೆಂದು ಪೊಲೀಸರಿಗೆ ಗೊಂದಲವಾಯಿತು. ಮೃತರ ಸ್ನೇಹಿತ ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು. ಹೀಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಂತ್ರಿಕ ಪುರಾವೆಗಳು ಮತ್ತು ಮೃತರ ಕಾಣೆಯಾದ ಮೊಬೈಲ್ ಫೋನ್ ಅನ್ನು ಪತ್ತೆಹಚ್ಚಿದ ನಂತರ ಪೊಲೀಸರು ಕುರೈ ಎಂಬಾತನನ್ನ ಬಂಧಿಸಿದ್ದಾರೆ.

ಹತ್ಯೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ರಕ್ತದಲ್ಲಿ ನೆನೆದಿದ್ದ ಬಟ್ಟೆಗಳನ್ನು ಹಾಸಿಗೆಯ ಮೇಲೆ ಹಾಕಿ, ಕೋಣೆಗೆ ಬೆಂಕಿ ಹಚ್ಚಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಾರಿಯಾಗುವ ವೇಳೆ ಶರ್ಮಿಳಾಳ ಮೊಬೈಲ್ ಫೋನ್‌ನ್ನು ಕೂಡ ತೆಗೆದುಕೊಂಡು ಹೋಗಿದ್ದಾನೆ. ಅದೇ ಮೊಬೈಲ್ ಆಧಾರವಾಗಿಯೇ ಆರೋಪಿ ಕರ್ನಲ್ ಕುರೈ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.


Ads on article

Advertise in articles 1

advertising articles 2

Advertise under the article