ಉಡುಪಿ ಡಿಸಿ ಸ್ವರೂಪ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ...!
Thursday, January 15, 2026
ಸಾಮಾಜಿಕ ಜಾಲತಾಣ ಫೇಸ್ ಬುಕ್ ಹಾಗೂ ವಾಟ್ಸಾಪ್ ನಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರ ಹೆಸರಿನ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ.
ಜಿಲ್ಲಾಧಿಕಾರಿ ಸ್ವರೂಪ ಅವರ ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗಾಗಿ ಹಣ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಗಳೇ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ನಕಲಿ ಖಾತೆ ತೆರೆದಿರುವುದರ ಬಗ್ಗೆ ಈಗಾಗಲೇ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದಾಗಿಯೂ ಕೂಡಾ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ಯಾರೂ ಕೂಡಾ ಹಣ ನೀಡಬಾರದು. ಇಂತಹ ಸಂದೇಶಗಳಿಗೆ ಸ್ಪಂಧಿಸದೇ ಇರುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.