ಅಸಹಾಯಕ ಸ್ಥಿತಿಯಲ್ಲಿದ್ದ ಇಬ್ಬರು ಯುವಕರ ರಕ್ಷಣೆ
Wednesday, January 07, 2026
ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದ ಬಳಿ ಅನಾರೋಗ್ಯ ಪೀಡಿತರಾಗಿ ಅಸಹಾಯಕ ಸ್ಥಿತಿಯಲ್ಲಿದ್ದ ಇಬ್ಬರು ಅಪರಿಚಿತ ಯುವಕರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಹಾಸನ ನಿವಾಸಿ ಹರೀಶ್(34) ಹಾಗೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಮತ್ತೋರ್ವ ಯುವಕ ಇಂದ್ರಾಳಿ ರೈಲ್ವೇ ನಿಲ್ದಾಣ ಬಳಿ ಪತ್ತೆಯಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿದ ನಿತ್ಯಾನಂದ ಒಳಕಾಡು ಅವರು ಅಂಬ್ಯುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಯಚರಣೆಗೆ ಆಟೋ ಚಾಲಕ ಮನೀಶ ಹಾಗೂ ಆತನ ಗೆಳೆಯರು ಸಹಕರಿಸಿದ್ದಾರೆ.
ಒರ್ವ ರೋಗಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದರಿಂದ ಹೆಸರು ವಿಳಾಸ ತಿಳಿದುಬಂದಿಲ್ಲ. ಮತ್ತೋರ್ವ ಗಾಯಾಳು ದಾಖಲು ಪ್ರಕ್ರಿಯೆ ನಡೆಸುವಾಗ ಹೆಸರು ಹರೀಶ್ (34) ಹಾಸನದ ನಿವಾಸಿ ಎಂದು ಹೇಳಿಕೊಂಡಿದ್ದಾರೆ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.