ಶಿರೂರು ಪರ್ಯಾಯ: ಕಾರ್ಕಳ-ಮಣಿಪಾಲ ಕಡೆಯಿಂದ ಬರುವ ವಾಹನಗಳ ಮಾರ್ಗ ಬದಲಾವಣೆ
ಶಿರೂರು ಪರ್ಯಾಯದ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಕಾರ್ಕಳ- ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಿರುವ ಆದೇಶವನ್ನು ಪರಿಷ್ಕರಿಸಲಾಗಿದೆ.
ಜ.17ರಂದು ಸಂಜೆ 7 ಗಂಟೆಯಿಂದ ಜ.18ರ ಬೆಳಗ್ಗ 7 ಗಂಟೆ ವರೆಗೆ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವ ವಾಹನಗಳು ನೇರವಾಗಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವುದು. ಅಲ್ಲದೇ ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆವರೆಗೆ ಎಲ್ಲಾ ವಾಹನಗಳು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಜ.17ರ ಸಂಜೆ 7 ಗಂಟೆಯಿಂದ ಜ.18ರ ಬೆಳಗ್ಗೆ 7 ಗಂಟೆಯ ವರೆಗೆ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಲಕ್ಷ್ಮೀಂದ್ರ ನಗರ, ಸಗ್ರಿನೊಳೆ ರಸ್ತೆಯಿಂದಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಅಂಬಾಗಿಲು ಜಂಕ್ಷನ್ ಮೂಲಕ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸಿ ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್ ಆಗಮಿಸಿ, ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸ್ ನಿಟ್ಟೂರು, ಅಂಬಾಗಿಲು, ಪೆರಂಪಳ್ಳಿ ಮಾರ್ಗವಾಗಿ ಪೆರಂಪಳ್ಳಿ ಭಾರತೀಯ ಆಹಾರ ನಿಗಮದ ಮುಂಭಾಗದಿಂದ ಸಗ್ರಿನೊಳೆ, ಲಕ್ಷ್ಮೀಂದ್ರ ನಗರ, ಸಿಂಡಿಕೇಟ್ ಸರ್ಕಲ್ ಮೂಲಕ ಮಣಿಪಾಲ, ಕಾರ್ಕಳ ಕಡೆಗೆ ತೆರಳುವಂತೆ ಆದೇಶಿಸಲಾಗಿದೆ. ಸಾರ್ವಜನಿಕರು ಸಂಚಾರ ನಿಯಮ ಪಾಲಿಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.