ಖಾಸಗಿ ಸ್ಲೀಪರ್ ಬಸ್ಸಿನಲ್ಲಿ ಬೆಂಕಿ ಆಕಸ್ಮಿಕ
Wednesday, January 28, 2026
ಖಾಸಗಿ ಸ್ಲೀಪರ್ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ.
ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.