ಬಳ್ಳಾರಿ ಗಲಾಟೆ ವಿವಾದ: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ
ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ವೇಳೆ ಫೈರಿಂಗ್ ಮಾಡಿದ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.
ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬOಧಿಸಿದ ಗನ್‌ಮ್ಯಾನ್‌ಗಳಿಂದ ಪೊಲೀಸರು 5 ಗನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಗನ್‌ಗಳನ್ನು ವಶಕ್ಕೆ ಪಡೆದ ಬೆನ್ನಲ್ಲೇ ಸತೀಶ್ ರೆಡ್ಡಿಯ ಖಾಸಗಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ. ಒಟ್ಟು ನಾಲ್ವರು ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದು, ಅವರ ಸುಳಿವು ಪತ್ತೆಯಾಗಿಲ್ಲ. ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ಗಲಾಟೆ ವೇಳೆ ನಡೆದ ಫೈರಿಂಗ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಮೃತ ವ್ಯಕ್ತಿಗೆ ತಗುಲಿರುವ ಗುಂಡು ಪೊಲೀಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದು ಎಂದು ಎಸ್‌ಪಿ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬAಧಿಸಿದ ವಿಡಿಯೋಗಳು ರಿಲೀಸ್ ಆಗಿದ್ದು, ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿರುವುದು ಕಂಡುಬAದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.