ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ನೇಪಾಳ ಪ್ರಜೆ ಸಾವು
Tuesday, January 06, 2026
ಉಡುಪಿ ನಗರದ ಸಿಟಿ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಡುಪಿ ಸಿಟಿಬಸ್ ನಿಲ್ದಾಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಮೃತ ವ್ಯಕ್ತಿ ನೇಪಾಳ ದೇಶದ ಪ್ರಜೆಯಾಗಿದ್ದು, ಉಡುಪಿ ನಗರದ ವಸತಿಸಂಕೀರ್ಣಗಳಲ್ಲಿ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದರೆಂದು ಮಾಹಿತಿ ತಿಳಿದುಬಂದಿದೆ.