ಭಗವಧ್ವಜ ಪ್ರದರ್ಶನ ವಿವಾದ: ಕಾಂಗ್ರೆಸ್ ನಡೆಗೆ ಬಿಜೆಪಿ ಆಕ್ರೋಶ
Wednesday, January 21, 2026
ಶೀರೂರು ಪರ್ಯಾಯದ ವೇಳೆ ಭಗವಾಧ್ವಜ ಪ್ರದರ್ಶಿಸಿ ಪರ್ಯಾಯ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ನೂರಾರು ವರ್ಷಗಳ ಇತಿಹಾಸವಿರುವ ಉಡುಪಿ ಪರ್ಯಾಯ ಮಹೋತ್ಸವದ ವೇಳೆ ಜಿಲ್ಲಾಧಿಕಾರಿಗಳು ನಗರಸಭೆಯ ಆಡಳಿತಾಧಿಕಾರಿಯಾಗಿ ಹಿಂದೂ ಸಂಪ್ರದಾಯದOತೆ ಕೇಸರಿ ಧ್ವಜ ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವಿಚಾರವಾಗಿ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸುವಂತೆ ಉಡುಪಿ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿರುವುದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ನೀತಿಗೆ ಹಿಡಿದ ಕೈಗನ್ನಡಿ. ತನ್ನ ಓಲೈಕೆ ರಾಜಕಾರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ಪ್ರತಿ ಆಚರಣೆಗಳಿಗೆ ಕಾಂಗ್ರೆಸ್ ನಿರಂತರ ಅಡ್ಡಗಾಲು ಹಾಕುತ್ತಿದೆ. ಪಾಕಿಸ್ತಾನಕ್ಕೆ ಜಯಕಾರ ಹಾಕುವವರನ್ನು ಬಗಲಲ್ಲಿಟ್ಟುಕೊಳ್ಳುವ, ಉಗ್ರ ಸಂಘಟನೆ ಹಮಾಸ್ ಸಮರ್ಥಕರನ್ನು ಹಿಂಬಾಲಕರನ್ನಾಗಿ ಹೊಂದಿರುವ ಕಾಂಗ್ರೆಸ್‌ನ ದೃಷ್ಟಿಯಲ್ಲಿ ಭಗವಾಧ್ವಜ ಹಾರಿಸುವುದು ಅಪರಾಧ. ಆದರೆ ಪಾಕಿಸ್ತಾನ ಬಾವುಟ ಹಾರಿಸಿದರೆ ಅಪರಾಧವಲ್ಲ ಎಂದು ಕಿಡಿ ಕಾರಿದೆ.