ಮಂಗಳೂರು ಮೂಲದ ಟೆಕ್ಕಿ ಬೆಂಗಳೂರಿನಲ್ಲಿ ಆತ್ಮಹತ್ಯೆ
Thursday, January 08, 2026
ಮಂಗಳೂರು ಮೂಲದ ಟೆಕ್ಕಿಯೊಬ್ಬ ಅಪಾರ್ಟ್ಮೆಂಟ್‌ನ 16ನೇ ಫ್ಲೋರ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬಗಲಗುಂಟೆಯ ಖಾಸಗಿ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ.
ಮೃತನನ್ನು ನಿಕ್ಷೇಪ್ ಬಂಗೇರಾ (24) ಎಂದು ಗುರುತಿಸಲಾಗಿದೆ. ಮೂಲತಃ ಮಂಗಳೂರಿನ ನಿವಾಸಿಯಾಗಿರುವ ನಿಕ್ಷೇಪ್ ಬಂಗೇರಾ, ವಿದೇಶದಲ್ಲಿ ಇಂಜಿನಿಯರಿOಗ್ ಮುಗಿಸಿ ತಂದೆ ತಾಯಿ ಜೊತೆ ಬಾಗಲಗುಂಟೆ ಪ್ರಿನ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪಾರ್ಟ್ಮೆಂಟ್‌ನ 16ನೇ ಮಹಡಿಗೆ ಬಂದು ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.