-->
 ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿಗೆ ವಿಶಿಷ್ಟ ಸೇವಾ ಪದಕ

ವಾಯುಸೇನೆ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿಗೆ ವಿಶಿಷ್ಟ ಸೇವಾ ಪದಕ


ಭಾರತೀಯ ಸೇನೆಯು ಪಾಕಿಸ್ತಾನದ ಪಹಲ್ಗಾಮ್ ದಾಳಿಗೆ ಪ್ರತಿಯಾಗಿ 2025 ರ ಮೇ ತಿಂಗಳಲ್ಲಿ ಭಾರತದ ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ನಡೆಸಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಕರಾವಳಿ ಮೂಲದ ವಾಯುಸೇನೆಯ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು 77 ನೇ ಗಣರಾಜ್ಯೋತ್ಸವದ ಸಂದರ್ಭ ರಾಷ್ಟ್ರಪತಿಗಳು ನೀಡುವ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 

ಇವರು ಸದಾಶಿವ ಶೆಟ್ಟಿ ಕೊಂಡಾಡಿ ಮತ್ತು ದೇವಕಿ ಶೆಟ್ಟಿ ಶಾನಕಟ್ಟು ಅವರ ಪುತ್ರ. ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು ಕಳೆದ 20 ವರ್ಷಗಳಿಂದ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕಳೆದ 2 ವರ್ಷಗಳಿಂದ ಕಾಶ್ಮೀರದ ಶ್ರೀನಗರದ ವಾಯುನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅಸಾಧಾರಣ ಸೇವೆ ಮತ್ತು ಕರ್ತವ್ಯನಿಷ್ಠೆಯಿಂದ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಆಪರೇಷನ್ ಸಿಂಧೂರ ಗ್ರೂಪ್ ಕ್ಯಾಪ್ಟನ್ ಸಂದೀಪ್ ಶೆಟ್ಟಿ ಅವರು ರಾಷ್ಟ್ರ ಸೇವೆಗೆ ತೋರಿದ ಧೈರ್ಯ ಮತ್ತು ಸಮರ್ಪಣೆಯನ್ನು ಎತ್ತಿ ತೋರಿಸುವ ಒಂದು ಪ್ರಮುಖ ಕಾರ್ಯಾಚರಣೆಯಾಗಿದೆ. ವಿಶಿಷ್ಟ ಸೇವಾ ಪದಕವು ಭಾರತೀಯ ವಾಯುಪಡೆಗೆ ಅವರ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸುತ್ತದೆ.

 

Ads on article

Advertise in articles 1

advertising articles 2

Advertise under the article