ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ
Tuesday, January 13, 2026
ತಮಿಳುನಾಡಿನ ಗೂಡಲೂರಿಗೆ ತೆರಳಲು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಸ್ವಾಗತಿಸಿದರು.
ಮಂಗಳವಾರ ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.15 ಗಂಟೆಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುಷ್ಪಗುಚ್ಛ ನೀಡಿ ಶಾಲು ಹೊದಿಸಿ ಗೌರವಿಸಿದರು.
ತಮಿಳುನಾಡಿನ ಗೂಡಲೂರಿನಲ್ಲಿ ಶಾಲಾ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮೈಸೂರಿನಿಂದ ಹೆಲಿಕಾಪ್ಟರ್ ನಲ್ಲಿ ಗೂಡಲೂರಿಗೆ ತೆರಳಿ ಸಂಜೆ.5.30 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು.ರಾಹುಲ್ ಗಾಂಧಿ ಭೇಟಿ ವೇಳೆ ಅಧಿಕಾರ ಹಂಚಿಕೆ,ಸAಪುಟ ವಿಸ್ತರಣೆ ಸೇರಿದಂತೆ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
