-->
ರಾಸಲೀಲೆ ಪ್ರಕರಣ; ರಾಮಚಂದ್ರ ರಾವ್ ವಿರುದ್ಧ ಮಾನಹಾನಿ ಸುದ್ದಿ ಬಿತ್ತರಿಸದಂತೆ ನಿರ್ಬಂಧ

ರಾಸಲೀಲೆ ಪ್ರಕರಣ; ರಾಮಚಂದ್ರ ರಾವ್ ವಿರುದ್ಧ ಮಾನಹಾನಿ ಸುದ್ದಿ ಬಿತ್ತರಿಸದಂತೆ ನಿರ್ಬಂಧ


ಸರ್ಕಾರಿ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ. ಇತ್ತ ಸೋಶಿಯಲ್ ಮೀಡಿಯಾ ಹಾಗೂ ಮಾಧ್ಯಮಗಳಲ್ಲಿ ಅಶ್ಲೀಲ ವಿಡಿಯೋ ಬಹಿರಂಗವಾಗುತ್ತಿದ್ದು, ನ್ಯಾಯಲಯವು ಮಾನಹಾನಿಕರ ಸುದ್ದಿಗಳನ್ನ ಬಿತ್ತರಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿದೆ.

ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬOಧಿಸಿದOತೆ ಹಿರಿಯ ಐಪಿಎಸ್ ಅಧಿಕಾರಿ ಕೆ ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ. 

ಅಲ್ಲದೇ ವೆಬ್‌ಸೈಟ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬOಧಿಸಿದ ಎಲ್ಲ ಮಾನಹಾನಿಕರ ವಿಡಿಯೋಗಳು, ಆಡಿಯೋ ಕ್ಲಿಪ್‌ಗಳು, ಕರೆ ರೆಕಾರ್ಡಿಂಗ್‌ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ.ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು 30 ಕ್ಕೂ ಹೆಚ್ಚು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅವರ ಬಗ್ಗೆ ಮಾನಹಾನಿಕರ ವಿಷಯವನ್ನು ತೆಗೆದುಹಾಕಲು ನಿರ್ದೇಶಿಸಿದೆ. 



 


Ads on article

Advertise in articles 1

advertising articles 2

Advertise under the article