ಸ್ಕೂಟರ್- ಖಾಸಗಿ ಬಸ್ ಡಿಕ್ಕಿ; ಸವಾರ ಸಾವು
Monday, January 05, 2026
ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.
ಮೃತರನ್ನು ಮಲ್ಪೆ ಪಡುಕೆರೆ ನಿವಾಸಿ ಕೃಷ್ಣರಾಜ ಕರ್ಕೇರ(50) ಎಂದು ಗುರುತಿಸಲಾಗಿದೆ.
ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಕೃಷ್ಣರಾಜ ಕರ್ಕೇರ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.