-->
 ಮಂಗಳೂರಿನಲ್ಲಿ ವೈಭವದ "ಕೊಡಿಯಾಲ ತೇರು" ಸಂಪನ್ನ

ಮಂಗಳೂರಿನಲ್ಲಿ ವೈಭವದ "ಕೊಡಿಯಾಲ ತೇರು" ಸಂಪನ್ನ


ಮಂಗಳೂರಿನ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿOದ ನೆರವೇರಿತು. 

ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊOಡು ಶ್ರೀ ದೇವರಿಗೆ ಶತಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿOದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು.

ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡರು.




Ads on article

Advertise in articles 1

advertising articles 2

Advertise under the article