ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ
Thursday, January 22, 2026
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಎಡಪದವು ಹೆದ್ದಾರಿಯ ಮುತ್ತೂರು ನೂದೊಟ್ಟು ಎಂಬಲ್ಲಿ ನಡೆದಿದೆ.
ಎಡಪದವು ನಿವಾಸಿ ಧೀರೇಶ್ ಎಂಬವರು ಕುಟುಂಬಿಕರೊOದಿಗೆ ಬಂಟ್ವಾಳದಿOದ ಎಡಪದವು ಕಡೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರು ನಿಲ್ಲಿಸಿ ಕಾರಿನಿಂದ ಇಳಿದಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ವ್ಯಾಪಿಸಿದೆ. ಘಟನೆಯಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.