ಮಾಜಿ ಸೈನಿಕನಿಗೆ ಅಪಮಾನ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
Tuesday, January 27, 2026
ಮಾಜಿ ಸೈನಿಕರೋರ್ವರಿಗೆ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಅವಮಾನಿಸಿದ ಘಟನೆಗೆ ಸಂಬOಧಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ತಿಳಿಸಿರುವ ಅವರು ನಿವೃತ್ತ ಸೇನಾ ಕಮಾಂಡರ್ ಶ್ಯಾಮರಾಜ್ ಅವರಿಗೆ ಸಾಸ್ತಾನದ ಟೋಲ್ ಗೇಟ್‌ನಲ್ಲಿ ಆಗಿರುವ ಅಪಮಾನಕಾರಿ ವಿದ್ಯಮಾನ ನೋವಿನ ಸಂಗತಿ. ತಕ್ಷಣ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ನು ಮುಂದೆ ಇಂತಹಾ ಘಟನೆಗಳು ಮರುಕಳಿಸದಂತೆ, ರಾಷ್ಟ್ರಸೇವಕ ಸೈನಿಕರಿಗೆ ಅಪಮಾನ ಆಗದಂತೆ ಎಚ್ಚರ ವಹಿಸುವುದು ನಮ್ಮೆಲ್ಲರ ಜವಬ್ದಾರಿ ಎಂದು ಹೇಳಿದ್ದಾರೆ.