ಕಾರು ಡಿಕ್ಕಿ; ಪಾದಚಾರಿ ಬಾಲಕ ಸಾವು
Thursday, January 01, 2026
ಕಾರೊಂದು ಡಿಕ್ಕಿ ಹೊಡೆದು ಬಾಲಕನೋರ್ವ ಮೃತಪಟ್ಟ ಘಟನೆ ಮೂಡಬಿದ್ರೆಯ ಮಾರೂರು ಹೊಸಂಗಡಿ ಬಳಿ ನಡೆದಿದೆ.
ಹೊಸಂಗಡಿ ನಿವಾಸಿ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ.
ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.