-->
 ಕೋಡಿಬೆಂಗ್ರೆ ಬೀಚ್ ನಲ್ಲಿ ಪ್ರವಾಸಿ ದೋಣಿ ಪಲ್ಟಿ; ಇಬ್ಬರು ಗಂಭೀರ

ಕೋಡಿಬೆಂಗ್ರೆ ಬೀಚ್ ನಲ್ಲಿ ಪ್ರವಾಸಿ ದೋಣಿ ಪಲ್ಟಿ; ಇಬ್ಬರು ಗಂಭೀರ


ಪ್ರವಾಸಿಗರನ್ನು ಸಮುದ್ರ ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೋಡಿಬೆಂಗ್ರೆ ಬೀಚ್ ನಲ್ಲಿ ನಡೆದಿದೆ. ಘಟನೆಯಿಂದಾಗಿ ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.  

ರೆಸಾರ್ಟ್ನಲ್ಲಿ ತಂಗಿದ್ದ ಸುಮಾರು 10 ಮಂದಿ ಪ್ರವಾಸಿಗರನ್ನು ವಿಹಾರಕ್ಕಾಗಿ ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಪ್ರವಾಸಿಗರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಮುದ್ರದ ಮಧ್ಯಭಾಗದಲ್ಲಿ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಇದರಿಂದ ದೋಣಿಯಲ್ಲಿದ್ದ ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಪ್ರವಾಸಿಗರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


  


Ads on article

Advertise in articles 1

advertising articles 2

Advertise under the article