ಬೆಂಕಿ ಅವಘಡ; ಹಲವು ಅಂಗಡಿಗಳು ಬೆಂಕಿಗಾಹುತಿ, ಅಪಾರ ನಷ್ಟ
Thursday, January 01, 2026
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಇಲೆಕ್ಟ್ರಾನಿಕ್ಸ್ ಅಂಗಡಿಯೊOದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮಳಿಗೆಗಳಿಗೂ ವ್ಯಾಪಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಸಂತೋಷ್ ಕುಮಾರ್ ಕೊಡಂಗೆ ಅವರ ಮಾಲಕತ್ವದ ಇಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯೊಳಗಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ವಸ್ತುಗಳಿಂದಾಗಿ ಜ್ವಾಲೆಯ ತೀವ್ರತೆ ಏಕಾಏಕಿ ಹೆಚ್ಚಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ನಿಯಂತ್ರಣಕ್ಕೆ ಬಂದಿಲ್ಲ. ಇಲೆಕ್ಟ್ರಾನಿಕ್ಸ್ ಅಂಗಡಿಯಿOದ ಹಬ್ಬಿದ ಬೆಂಕಿ ಪಕ್ಕದಲ್ಲೇ ಇದ್ದ ಸಣ್ಣಪುಟ್ಟ ಅಂಗಡಿಗಳು, ಹೋಟೆಲ್ ವರೆಗೂ ವ್ಯಾಪಿಸಿದೆ.
ಬಳಿಕ ಸ್ಟಾರ್ ವೈನ್ಸ್, ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಪಾಸ್ಟ್ ಫುಡ್, ಸಹಿತ ಸಣ್ಣ ಅಂಗಡಿಗಳೆಲ್ಲವೂ ಬೆಂಕಿಗೆ ಆಹುತಿಯಾಗಿದೆ. ಬಂಟ್ವಾಳದಿOದ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ.


