ಕುಂದಾಪುರ ಶೆಟ್ರಕಟ್ಟೆ ಅಪಘಾತ ಪ್ರಕರಣ; ಪಿಎಸ್‌ಐ, ಸಿಬ್ಬಂದಿ ತಲೆದಂಡ
Wednesday, January 07, 2026
ಕುOದಾಪುರದ ಶೆಟ್ರಕಟ್ಟೆಯಲ್ಲಿ ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತ ಪ್ರಕರಣಕ್ಕೆ ಸಂಬOಧಿಸಿ ಕುಂದಾಪುರ ಗ್ರಾಮಾಂತರ ಠಾಣಾ ಪಿಎಸ್‌ಐ ನಾಸೀರ್ ಹುಸೇನ್ ಅವರನ್ನು ಅಜೆಕಾರು ಠಾಣೆಗೆ ಬೇರೆ ಕರ್ತವ್ಯದ ನಿಮಿತ್ತ ನಿಯೋಜನೆ ಮಾಡಿ ಉಡುಪಿ ಎಸ್ಪಿ ಹರಿರಾಂ ಶಂಕರ್ ಆದೇಶಿಸಿದ್ದಾರೆ.
ಅಲ್ಲದೇ ಠಾಣೆಯ ಬೀಟ್ ಪೊಲೀಸ್ ಸಿಬ್ಬಂದಿ ಯಾದವ್ ಅವರನ್ನು ಅಮಾನತು ಮಾಡಲಾಗಿದೆ. ಗ್ರಾಮಾಂತರ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಜವಾಬ್ದಾರಿಯನ್ನು ಶಂಕರನಾರಾಯಣದ ಕುಂದಾಪುರ ಗ್ರಾಮಾಂತರ ವೃತ್ತದ ಸಿಪಿಐ ಜಯಂತ್ ಕಾಯ್ಕಿಣಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಕುಂದಾಪುರ ಉಪ ವಿಭಾಗದ ವ್ಯಾಪ್ತಿಯ ಅಮಾಸೆಬೈಲು, ಬೈಂದೂರು, ಕುಂದಾಪುರ, ಕೊಲ್ಲೂರು, ಶಂಕರನಾರಾಯಣ ಮೊದಲಾದ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಾಸೀರ್ ಹುಸೇನ್ ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಉಪ ನಿರೀಕ್ಷಕರಾಗಿ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.