ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್ ಪ್ರಶಸ್ತಿ
Friday, January 09, 2026
ಕರ್ನಾಟಕ ಸರ್ಕಾರದ 2020 ಹಾಗೂ 2021 ನೇ ಸಾಲಿನ ಸಿನಿಮಾ ಕ್ಷೇತ್ರದ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಟಿ ಡಾ. ಜಯಮಾಲಾ ಅವರನ್ನು ಡಾ. ರಾಜ್‌ಕುಮಾರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನು ಸಹ ಘೋಷಿಸಲಾಗಿದೆ. ಈ ಎಲ್ಲ ಪ್ರಶಸ್ತಿಗಳು 5 ಲಕ್ಷ ರೂಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿವೆ. ಡಾ.ಜಯಮಾಲಾ ಅವರಿಗೆ 2020ರ ಡಾ.ರಾಜ್‌ಕುಮಾರ್ ಪ್ರಶಸ್ತಿ, ನಿರ್ದೇಶಕ ಎಂ.ಎಸ್ ಸತ್ಯು ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ಹಿರಿಯ ಸ್ಥಿರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ್ ನಾರಾಯಣ್ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ಹಾಗೂ 2021ರ ಡಾ.ರಾಜ್‌ಕುಮಾರ್ ಪ್ರಶಸ್ತಿ ನಿರ್ಮಾಪಕ ಸಾ.ರಾ ಗೋವಿಂದ್ ಅವರಿಗೆ, ನಿರ್ದೇಶಕ ಶಿವರುದ್ರಯ್ಯ ಕೆ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ, ನಟ ಎಂ.ಕೆ ಸುಂದರ್ ರಾಜ್ ಅವರಿಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ ನೀಡಲಾಗುವುದು ಎಂದು ತಿಳಿದು ಬಂದಿದೆ.