ಕಂಟೈನರ್ ಲಾರಿ- ಸ್ಕೂಟರ್ ಅಪಘಾತ; ಸವಾರ ಸ್ಥಳದಲ್ಲೇ ಸಾವು
Sunday, January 25, 2026
ಕಂಟೈನರ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಉಡುಪಿಯ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಸ್ಕೂಟರ್ ಸವಾರ ಮಣಿಪಾಲದ 19 ವರ್ಷದ ಅವಿನಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಡುಪಿಯಿಂದ ಮಣಿಪಾಲ ಕಡೆಗೆ ಸಾಗುತ್ತಿದ್ದ ಕಂಟೇನರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಪಲ್ಟಿಯಾಗಿ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಕಂಟೇನರ್ ಸವಾರ ನ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.