ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ
Tuesday, January 06, 2026
ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ಅವರು ಪುಣೆಯಲ್ಲಿ ನಿಧನರಾಗಿದ್ದಾರೆ.
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ್ ಕಲ್ಮಾಡಿ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಬಗ್ಗೆ ಅವರ ಕುಟುಂಬದ ಮೂಲಗಳು ದೃಢಪಡಿಸಿದೆ.
ಪ್ರಭಾವಿ ರಾಜಕಾರಣಿಯಾಗಿದ್ದ ಸುರೇಶ್ ಕಲ್ಮಾಡಿ ಲೋಕಸಭೆಯಲ್ಲಿ ಹಲವು ಬಾರಿ ಪುಣೆ ನಗರವನ್ನು ಪ್ರತಿನಿಧಿಸಿದ್ದರು. ಪಿ.ವಿ.ನರಸಿಂಹರಾವ್ ಸರಕಾರದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಕಲ್ಮಾಡಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಸುರೇಶ್ ಕಲ್ಮಾಡಿ ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.