ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸಚಿವ ಸುರೇಶ್ ಗೋಪಿ ಭೇಟಿ
Friday, January 16, 2026
ಕೇಂದ್ರ ಸಚಿವ, ಮಲಯಾಳಂ ಚಿತ್ರರಂಗದ ಹೆಸರಾಂತ ನಟ ಸುರೇಶ್ ಗೋಪಿ ಅವರು ಕುಟುಂಬ ಸದಸ್ಯರೊಂದಿಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಅವರು ಶಿರೂರು ಪರ್ಯಾಯದ ಆಮಂತ್ರಣ ಪತ್ರಿಕೆ ನೀಡಿ ಪರ್ಯಾಯ ಕಾರ್ಯಕ್ರಮಗಳಿಗೆ ಆಹ್ವಾನಿಸಿದರು. ಈ ಸಂದರ್ಭ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ,ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ ಉಪಸ್ಥಿತರಿದ್ದರು.