ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯ ಬಂಧನ
Monday, January 19, 2026
ಕಾರ್ಕಳದ ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಿಟ್ಟೆ ಗ್ರಾಮದ ಸುರೇಶ್ ಪೂಜಾರಿ ಬಂಧಿತ ಆರೋಪಿ. ಜ.16ರಂದು ಸೊಸೈಟಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ. ಈತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 04/2026, 331(2).305, 62 ಭಾರತೀಯ ನ್ಯಾಯ 2023ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿ ಸುರೇಶ್ ಪೂಜಾರಿ ವಿರುದ್ಧ ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.