ತಲ್ಲೂರು ಅಪಘಾತ; ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಚಿವೆ ಹೆಬ್ಬಾಳ್ಕರ್ ಸೂಚನೆ
Tuesday, January 06, 2026
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಲ್ಲೂರು ನೆರಳಕಟ್ಟೆಯ ಶೆಟ್ರಕಟ್ಟೆ ಪೆಟ್ರೋಲ್ ಬಂಕ್ ಬಳಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.
ಬಹುತೇಕ ಕಾಲೇಜು ವಿದ್ಯಾರ್ಥಿಗಳೇ ಪ್ರಯಾಣಿಸುತ್ತಿದ್ದ ಬಸ್ ಅಪಘಾತದ ವಿಷಯ ತಿಳಿದು ಆಘಾತವಾಯಿತು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ವೇಳೆ ಕುಟುಂಬ ಸದಸ್ಯರು ಧೈರ್ಯದಿಂದ ಇರಬೇಕು ಎಂದು ಸಚಿವರು ವಿನಂತಿಸಿದ್ದಾರೆ.
ಘಟನೆ ಕುರಿತು ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದು, ಯಾರೂ ಆತಂಕಗೊಳ್ಳುವುದು ಬೇಡ ಎಂದು ಸಚಿವರು ಭರವಸೆ ನೀಡಿದ್ದಾರೆ.