-->
 ಸ್ಕೂಟರ್-ಮರಳು ಸಾಗಾಟ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸ್ಕೂಟರ್-ಮರಳು ಸಾಗಾಟ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು


ಮರಳು ಸಾಗಾಟ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರದಲ್ಲಿ ಹಂಗಳೂರು ರಾಷ್ಟ್ರೀಯ ಹೆದ್ದಾರಿ-66ರ ಡಿವೈಡರ್ ಬಳಿ ನಡೆದಿದೆ.

ಮೂಲತಃ ಆಲೂರಿನವರಾದ ಪ್ರಸಕ್ತ ಕೋಟೇಶ್ವರದ ಅಂಕದಕಟ್ಟೆ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೃಷ್ಣಮೂರ್ತಿ ಅಡಿಗ (57) ಮೃತಪಟ್ಟವರು. ಅವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ವಾರದ ಹಿಂದೆ ಖರೀದಿಸಿದ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಮನೆಯಿಂದ ಹೊರಟವರು ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ತಿರುವು ಪಡೆದಾಗ ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಕೃಷ್ಣಮೂರ್ತಿಯವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಟಿಪ್ಪರ್ ಚಾಲಕ ಶ್ರೇಯಾಮ್ಸ್ ಜೈನ್ ವಿರುದ್ಧ ಕುಂದಾಪುರ ಸಂಚಾರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ : 4/2026 ಕಲಂ. 281,106(1) BNSರಂತೆ ಪ್ರಕರಣೆ ದಾಖಲಿಸಿಕೊಳ್ಳಲಾಗಿದೆ. ಕುಂದಾಪುರ ನಗರ ಠಾಣೆ ಪೊಲೀಸ್ ನಿರೀಕ್ಷಕ ಜಯರಾಮ ಗೌಡ, ಸಂಚಾರ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Ads on article

Advertise in articles 1

advertising articles 2

Advertise under the article