-->
ಪುತ್ತೂರು ಕೋಟಿ ಚೆನ್ನಯ ಕಂಬಳ ಹಿನ್ನೆಲೆ: ಮದ್ಯದಂಗಡಿ ಬಂದ್

ಪುತ್ತೂರು ಕೋಟಿ ಚೆನ್ನಯ ಕಂಬಳ ಹಿನ್ನೆಲೆ: ಮದ್ಯದಂಗಡಿ ಬಂದ್


ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಜ.24 ಮತ್ತು 25ರಂದು ಪುತ್ತೂರು ನಗರದಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. 

ಜನವರಿ 24 ರಂದು ಬೆಳಗ್ಗೆ 6 ಗಂಟೆಯಿಂದ ಜನವರಿ 25 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬಾರ್, ವೈನ್ ಶಾಪ್ ಮತ್ತು ಮದ್ಯದ ಅಂಗಡಿಗಳು ಈ ಅವಧಿಯಲ್ಲಿ ಮುಚ್ಚಿರಲಿವೆ.ಪುತ್ತೂರು ಕಂಬಳವು ಜನವರಿ 24 ಮತ್ತು 25 ರಂದು ವಿಜೃಂಭಣೆಯಿಂದ ಜರುಗಲಿದ್ದು, 200ಕ್ಕೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ.

Ads on article

Advertise in articles 1

advertising articles 2

Advertise under the article