ಮಹಾರಾಷ್ಟ್ರದಲ್ಲಿ ವಿಮಾನ ಪತನ: ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವು
Wednesday, January 28, 2026
ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ.
ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್ ಪವಾರ್ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.
