ಮನರೇಗಾ ಕಾನೂನು ಮರುಸ್ಥಾಪನೆಗೆ ಆಗ್ರಹ; ರಾಜ್ಯಪಾಲರಿಗೆ ಮನವಿ
Tuesday, January 27, 2026
ಮನರೇಗಾ ಕಾನೂನು ಮರುಸ್ಥಾಪನೆಗೆ ಆಗ್ರಹಿಸಿ ಕಾರ್ಮಿಕರ ಉದ್ಯೋಗ ಖಾತರಿ ಹಾಗೂ ಜೀವನೋಪಾಯದ ಮೇಲೆ ದಾಳಿ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಕಾರ್ಮಿಕರ ಕ್ಷಮೆಯಾಚಿಸಬೇಕು ಎಂದು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರನ್ ದೀಪ್ ಸುರ್ಜೇವಾಲಾ ನೇತೃತ್ವದ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್, ಸಚಿವರಾದ ಈಶ್ವರ್ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಬಿಡಿಎ ಅಧ್ಯಕ್ಷರಾದ ಹ್ಯಾರಿಸ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ರಂಗನಾಥ್, ಪ್ರಿಯಾಕೃಷ್ಣ, ರಿಜ್ವಾನ್ ಅರ್ಷದ್, ನಯನಾ ಮೋಟಮ್ಮ, ರೂಪಕಲಾ ಶಶಿಧರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.
