ಭಗವದ್ವಜ ಹಿಡಿದು ಪರ್ಯಾಯಕ್ಕೆ ಚಾಲನೆ; ಡಿಸಿ ಸ್ವರೂಪ ನಡೆಗೆ ರಮಾನಾಥ ರೈ ಖಂಡನೆ
Wednesday, January 21, 2026
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರು ಭಗವಧ್ವಜ ಹಿಡಿದು ಪರ್ಯಾಯ ಮಹೋತ್ಸವಕ್ಕೆ ಚಾಲನೆ ನೀಡಿರುವುದನ್ನು ಮಾಜಿ ಸಚಿವ ರಮಾನಾಥ್ ರೈ ಖಂಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ಗಾಂಧಿ ಪ್ರತಿಮೆ ಎದುರು ಆಯೋಜಿಸಿದ್ದ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇವಸ್ಥಾನಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಎಲ್ಲರಿಗೂ ಸಮಾನವಾಗಿದ್ದು, ಅಲ್ಲಿ ಯಾವುದೇ ರಾಜಕೀಯ ಪ್ರೇರಿತ ಪತಾಕೆಗಳನ್ನು ಹಾರಿಸಬಾರದು ಎಂದು ಸ್ಪಷ್ಟವಾಗಿ ಹೇಳಿದರು. ದೇವಸ್ಥಾನದಲ್ಲಿ ಕಾಂಗ್ರೆಸ್, ಕೇಸರಿ ಅಥವಾ ಹಸಿರು ಯಾವುದೇ ಬಣ್ಣದ ಪತಾಕೆಗಳನ್ನು ಬಳಸಬಾರದು. ಧಾರ್ಮಿಕ ಕಾರ್ಯಕ್ರಮಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ತಪ್ಪು. ಯಾವುದೇ ರಾಜಕೀಯ ಪ್ರೇರಿತ ಧ್ವಜವನ್ನು ಹಾರಿಸುವುದನ್ನು ನಾವು ದಿಕ್ಕರಿಸಬೇಕು ಎಂದು ರಮಾನಾಥ್ ರೈ ಹೇಳಿದ್ದಾರೆ.
ಕೇಸರಿ ಧ್ವಜ ಹಿಡಿದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ರಮವನ್ನು ಎಲ್ಲಾ ಕಾಂಗ್ರೆಸಿಗರು ತಪ್ಪು ಎಂದು ಪರಿಗಣಿಸಬೇಕು ಎಂದ ಅವರು, ಸಾರ್ವಜನಿಕ ಮತ್ತು ಧಾರ್ಮಿಕ ವೇದಿಕೆಗಳಲ್ಲಿ ರಾಜಕೀಯ ಚಿಹ್ನೆಗಳಿಗೆ ಅವಕಾಶ ನೀಡಬಾರದು ಎಂದು ಅಭಿಪ್ರಾಯಪಟ್ಟರು.