ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ
Thursday, January 08, 2026
ಪೊಲೀಸ್ ಹೆಡ್ ಕಾನ್ಸ್ಟೇಬಲ್‌ವೊಬ್ಬರು ಡೆತ್‌ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪಶ್ಚಿಮ ಸಂಚಾರ ಠಾಣೆಯ ಹೆಡ್ ಕಾನ್ಸ್ಟೇಬಲ್ ಮುಹಮ್ಮದ್ ಝಕ್ರಿಯಾ(55) ಆತ್ಮಹತ್ಯೆಗೆ ಶರಣಾದವರು. ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದ ಝಕ್ರಿಯಾ ಅವರು ಮೂರು ದಿನಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿ ಠಾಣೆಗೆ ವಾಪಾಸ್ಸಾಗಿದ್ದ ಇವರು ರಾತ್ರಿ ವೇಳೆ ಸಂಚಾರಿ ಠಾಣೆಯ ಹಿಂಬದಿ ಸೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಸಹೋದ್ಯೋಗಿ ನಾಸೀರ್ ಅಹಮ್ಮದ್ ಎಂಬವರ ಹೆಸರನ್ನು ಉಲ್ಲೇಖಿಸಿ, ಮಾನಸಿಕ ಕಿರುಕುಳ ನೀಡಿರುವುದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆಯಲಾಗಿದೆ.