-->
 ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ- ಸಿಎಂ ಸಿದ್ದರಾಮಯ್ಯ ಆರೋಪ

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ- ಸಿಎಂ ಸಿದ್ದರಾಮಯ್ಯ ಆರೋಪ


ರಾಜ್ಯಪಾಲರು ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ರದ್ದುಪಡಿಸಿ, ವಿಬಿಜಿರಾಮ್ ಜಿ ( ವಿಕಸಿತ ಭಾರತ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು. 

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತದೆ ಎಂದರು.

ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೇ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.


Ads on article

Advertise in articles 1

advertising articles 2

Advertise under the article