ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
Tuesday, January 06, 2026
ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಆರೋಪಿಯನ್ನು ಫೋಕ್ಸೋ ಪ್ರಕರಣದಡಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಶೀರ್ (40) ಬಂಧಿತ ಆರೋಪಿ. ಈತ ತನ್ನ 15 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದ್ದು, ಪೋಕ್ಸೋ ಪ್ರಕರಣದಡಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.