-->
 ಮಾದಕ ವಸ್ತು ಮಾರಾಟಕ್ಕೆ ಯತ್ನ; ನಾಲ್ವರು ಆರೋಪಿಗಳ ಬಂಧನ

ಮಾದಕ ವಸ್ತು ಮಾರಾಟಕ್ಕೆ ಯತ್ನ; ನಾಲ್ವರು ಆರೋಪಿಗಳ ಬಂಧನ


ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತು ಎಂಡಿಎOಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ತೂರಿನ ಮೊಹಮ್ಮದ್ ಹರ್ಷದ್(33), ಮಹಮ್ಮದ್ ಆರೀಶ್(31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್(46) ಮತ್ತು ಬಂಟ್ವಾಳ ನಿವಾಸಿ ಮುಸ್ತಾಫ(46) ಬಂಧಿತ ಆರೋಪಿಗಳು. ಬಂಧಿತರಿOದ 50,000 ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎOಎ,  0.87 ಗ್ರಾಂ ಗಾಂಜಾ, ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ಆರು ಲಕ್ಷ ಮೌಲ್ಯದ 2 ಕಾರುಗಳು ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 6,50,000 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 13-2026, ಕಲಂ : - 8(c)21(b) NDPS Act.25(1B)(B) Arms Act ರಂತೆ ಪ್ರಕರಣ ದಾಖಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಶ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್ , ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ರವರು ಹಾಗೂ ಸೋಕೋ ತಂಡದವರು ಭಾಗಿಯಾಗಿದ್ದರು.

Ads on article

Advertise in articles 1

advertising articles 2

Advertise under the article