ಗುರುಪುರದ ನದಿಗೆ ಹಾರಿ ಯುವತಿ ಆತ್ಮಹತ್ಯೆ
Monday, January 05, 2026
ಯುವತಿಯೊಬ್ಬರು ಮಂಗಳೂರಿನ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ಸ್ಕೂಟರ್ ನಿಲ್ಲಿಸಿ ಬಳಿಕ ನದಿಗೆ ಜಿಗಿದಿದ್ದಾರೆ.
ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.