-->
 ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ

ಸಚಿವ ದಿನೇಶ್ ಗುಂಡೂರಾವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ


ಚಿಕ್ಕಪೇಟೆಯಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. 

ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಬ್ಯಾನರ್ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಚಿಕ್ಕಪೇಟೆಯಲ್ಲಿ ಸಂಕ್ರಾOತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾOತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕಾರ್ಯಕ್ರಮ ಕೂಡಾ ಇತ್ತು. 

ಸಂಕ್ರಾOತಿ ಹಬ್ಬದ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದ ಮುಂದೆ ಹುಲ್ಲು, ಹೂ ಬ್ಯಾನರ್ ಗಳಿಂದ ಸಿಂಗಾರ ಮಾಡಲಾಗಿತ್ತು. ಪಟಾಕಿ ಹಚ್ಚುವಾಗ ಬೆಂಕಿ ಕಿಡಿ ಬ್ಯಾನರ್ ಗೆ ಹಾಕಿದ್ದ ಹುಲ್ಲಿಗೆ ಬಿದ್ದು ಅವಘಡ ಸಂಭವಿಸಿದೆ.ದೇವರ ದರ್ಶನ ಪಡೆಯಲು ವೃದ್ಧರು, ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು. ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. 

Ads on article

Advertise in articles 1

advertising articles 2

Advertise under the article