ಗಲಾಟೆ ಪ್ರಕರಣ: ಪರಾರಿಯಾಗಿದ್ದ ಆರೋಪಿಯ ಬಂಧನ
Saturday, January 24, 2026
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಪ್ರಮುಖ ಆರೋಪಿ, ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ತೆಂಕನಿಡಿಯೂರು ನಿವಾಸಿ ಕಿರಣ್ ಪಿಂಟೋ (49) ಎಂಬಾತನನ್ನು ಬ್ರಹ್ಮಾವರ ಪೊಲೀಸರು ಜ.24ರಂದು ಬಂಧಿಸಿದ್ದಾರೆ.
ಜ.18ರಂದು ಬಾರ್ ಎದುರು ನಡೆದ ಹಲ್ಲೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಆತ, ಜ.21ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದನು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಬ್ರಹ್ಮಾವರ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಆರೋಪಿಯನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.