-->
 ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ


ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬOಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರಿನ ಕಸಬಾ ಬೆಂಗರೆಯ ನೌಮಾನ್ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನೌಮಾನ್ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದಿಂದ ಹಲವು ಬಾರಿ ವಾರೆಂಟ್ ಹೊರಡಿಸಿದರೂ ಹಾಜರಾಗದೆ ಕಳೆದ 5 ವರ್ಷದಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ್‌ರ ಮಾರ್ಗದರ್ಶನಂತೆ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ, ಕಾನ್‌ಸ್ಟೇಬಲ್‌ಗಳಾದ ಚಂದ್ರಶೇಖರ, ರಾಘವೇಂದ್ರ ಎಚ್.ಎಂ. ಮಂಗಳವಾರ ಉಪ್ಪಳ ಸಮೀಪದ ಕೈಕಂಬ ಎಂಬಲ್ಲಿOದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ads on article

Advertise in articles 1

advertising articles 2

Advertise under the article