🔥ಚಾರ್ಮಾಡಿ ಘಾಟ್ ನಲ್ಲಿ ಹೊತ್ತಿ ಉರಿದ ಲಾರಿ🔥
Saturday, January 10, 2026
ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ.
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.