ಶಬರಿಮಲೆ ಚಿನ್ನ ಕಳವು ಪ್ರಕರಣ; ಬೆಂಗಳೂರು, ಬಳ್ಳಾರಿಯಲ್ಲಿ ಇಡಿ ದಾಳಿ
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬOಧಿಸಿ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇಡಿ ದಾಳಿ ನಡೆಸಿದೆ.
ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರOದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ. ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ ಮನೆ, ಬೆಂಗಳೂರಿನ ಶ್ರೀರಾಂಪುರ ಅಯ್ಯಪ್ಪ ದೇವಸ್ಥಾನ ಹಾಗೂ ಟ್ರಸ್ಟಿ ಮನೆ, ಉನ್ನಿಕೃಷ್ಣನ್ ಮನೆ ಸೇರಿ ಹಲವೆಡೆ ದಾಳಿ ನಡೆಸಿದ್ದಾರೆ. ಈ ಹಿಂದೆ ಎಸ್‌ಐಟಿ ಅಧಿಕಾರಿಗಳು ಕೂಡ ದಾಳಿ ನಡೆಸಿದ್ದರು. ಈಗಾಗಲೇ ಎಸ್‌ಐಟಿ ಅಧಿಕಾರಿಗಳು ದೇಗುಲದ ಪ್ರಧಾನ ಅರ್ಚಕ ಕಂದರಾರು ರಾಜೀವ್‌ನನ್ನು ಬಂಧಿಸಿದ್ದರು.
ಚಿನ್ನ ಕಳ್ಳತನದ ಹಿಂದೆ ದೊಡ್ಡ ಸಂಚು ಮತ್ತು ಮಧ್ಯವರ್ತಿಗಳ ಸಂಪರ್ಕವಿರುವ ಬಗ್ಗೆ ಎಸ್‌ಐಟಿ ಶಂಕೆ ವ್ಯಕ್ತಪಡಿಸಿದೆ. ಕಂದರಾರು ರಾಜೀವ್ ಎಂಬಾತ ತಂತ್ರಿ ಉನ್ನಿಕೃಷ್ಣನ್ ಪೊಟ್ಟಿಯವರೊಂದಿಗೆ ನಿಕಟ ಸಂಬOಧ ಹೊಂದಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಫಲಕಗಳಿಗೆ ಚಿನ್ನ ಲೇಪಿಸುವ ನೆಪದಲ್ಲಿ ನಡೆದ ಪ್ರಾಯೋಜಕತ್ವದ ನಂತರ ಚಿನ್ನದ ಕಳ್ಳತನಕ್ಕೆ ಕಾರಣವಾಯಿತು ಎಂಬ ಆರೋಪ ಕೇಳಿಬಂದಿದೆ. ಫಲಕಗಳಿಗೆ ಚಿನ್ನ ಲೇಪಿಸಲು ಕಂದರಾರು ರಾಜೀವ್ ಅನುಮತಿ ನೀಡಿದ್ದ ಎಂಬುದು ತನಿಖೆಯಲ್ಲಿ ಮಹತ್ವದ ಅಂಶವಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಎಸ್‌ಐಟಿ ರಾಜೀವ್‌ನಿಂದ ಮಾಹಿತಿ ಸಂಗ್ರಹಿಸಿತ್ತು.