ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ
Thursday, January 22, 2026
ಉಡುಪಿಯ ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಮಹಿಷಮರ್ದಿನಿ ಅಯ್ಯಪ್ಪ ದೇವಸ್ಥಾನದ ಮನ್ಮಹಾರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ವಾಲಿಬಾಲ್ ಫ್ರೆಂಡ್ಸ್ ಪರ್ಕಳ ಇವರ ವತಿಯಿಂದ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ 'ಸಂಗೀತ ಗಾನ ಸಂಭ್ರಮ' ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಕರಾಟೆ ಪಟು ಛಾಯಾ ಎಸ್ ಪೂಜಾರಿ ಹೆರ್ಗ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 12ನೇ ಸ್ಥಾನ ಪಡೆದ ನಿರಂಜನ್ ಚೆನ್ನದಾಸರ್ ಹಾಗೂ ಭಾರತೀಯ ಸೇನೆಗೆ ಆಯ್ಕೆಯಾದ ಅಮೋಘ್ ಭಂಡಾರಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಉದ್ಯಮಿಗಳಾದ ಕರುಣಾಕರ ಶೆಟ್ಟಿ ಪುಣೆ, ವಿಜಯ್ ಶೆಟ್ಟಿ, ದೇವಸ್ಥಾನ ಮುಕ್ತೇಸರ ಮುರಳೀಧರ್ ನಕ್ಷತ್ರಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ದಿನೇಶ್ ಹೆಗ್ಡೆ ಆತ್ರಾಡಿ, ಸುಧೀರ್ ಶೆಟ್ಟಿ, ಸುಕೇಶ್ ಕುಂದರ್, ಗಣೇಶ್ ಪಾಟೀಲ್, ಸುಧೀರ್ ಶೆಟ್ಟಿಗಾರ್, ವಾಲಿಬಾಲ್ ಫ್ರೆಂಡ್ಸ್ ನ ಅಕ್ಷಯ್ ಬಂಗೇರ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

