-->
 ನೇಣು ಬಿಗಿದು ಯುವಕ ಆತ್ಮಹತ್ಯೆ…!

ನೇಣು ಬಿಗಿದು ಯುವಕ ಆತ್ಮಹತ್ಯೆ…!



ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ.

ಕುಂಜಿಬೆಟ್ಟು ನಿವಾಸಿ ರಾಜು ಅವರ ಪುತ್ರ ರಂಜಿತ್(28) ಮೃತ ಯುವಕ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಈತ ಗುರುವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಬಂದಿದ್ದ. ನಂತರ ತನ್ನ ಪ್ರೇಯಸಿಯೊಂದಿಗೆ ಫೋನಿನಲ್ಲಿ ಮಾತನಾಡುತ್ತಾ ರೂಮಿನ ಬಾಗಿಲು ಹಾಕಿಕೊಂಡಿದ್ದ. ನಂತರ ರೂಮಿನೊಳಗಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದನ್ನು ಗಮನಿಸಿದ ಆತನ ತಂದೆ ಕಿಟಕಿಯ ಮೂಲಕ ಇಣುಕಿ ನೋಡಿದ್ದಾರೆ. ಈ ವೇಳೆ ಆತ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಆತನನ್ನು ನೇಣು ಕುಣಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article