-->
ಕುಡಿದ ಮತ್ತಿನಲ್ಲಿ ತಂದೆಯಿಂದಲೇ ಮಗನ ಹತ್ಯೆ..!

ಕುಡಿದ ಮತ್ತಿನಲ್ಲಿ ತಂದೆಯಿಂದಲೇ ಮಗನ ಹತ್ಯೆ..!


ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಪ್ರದೀಪ್ ಆಚಾರ್ (29) ಎಂದು ಗುರುತಿಸಲಾಗಿದೆ.  ಮೃತನ ತಂದೆ ರಮೇಶ್ ಆಚಾರ್ ಕೊಲೆ ಆರೋಪಿ.

ಪ್ರತೀ ದಿನ ಕ್ಷುಲಕ ಕಾರಣಕ್ಕೆ ಮದ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದ ತಂದೆ–ಮಗನಿಂದ ಬೇಸತ್ತ ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರು. ಮನೆಯಲ್ಲಿ ತಂದೆ–ಮಗ ಇಬ್ಬರೇ ವಾಸವಿದ್ದರು ಎನ್ನಲಾಗಿದೆ.

ನಿನ್ನೆ ರಾತ್ರಿ ಮದ್ಯದ ಅಮಲಿನಲ್ಲಿ ರಮೇಶ್ ಆಚಾರ್ ತನ್ನ ಮಗ ಪ್ರದೀಪ್‌ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಪ್ರದೀಪ್ ರಕ್ತದ ಮಡುವಿನಲ್ಲಿ ಇಡೀ ರಾತ್ರಿ ಬಿದ್ದು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ.

ಬೆಳಗ್ಗೆ ಮಗನ ಮೃತದೇಹವನ್ನು ಹಾಲ್‌ನಿಂದ ಹೊರಗೆ ಎಳೆದು ತಂದಿದ್ದ ಆರೋಪಿಯನ್ನು ಕಂಡ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

Ads on article

Advertise in articles 1

advertising articles 2

Advertise under the article