ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು
Sunday, January 18, 2026
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್(37) ಹಾಗೂ ಸುಜಿತ್(26) ಮೃತಪಟ್ಟವರು. ಇವರಿಬ್ಬರು ಕುಲ್ಕುಂದ ಬಳಿ ಸ್ನಾನಕ್ಕೆ ಇಳಿದಿದ್ದರು ಎಂದು ತಿಳಿದು ಬಂದಿದೆ. ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.